ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಶಾಲಾ ವಿದ್ಯಾರ್ಥಿನಿ ಮೇಲೆ 3 ಶಿಕ್ಷಕರಿಂದಲೇ ಅತ್ಯಾಚಾರ..! ಸ್ಥಳೀಯರಿಂದ ಪ್ರತಿಭಟನೆ

ನ್ಯೂಸ್ ನಾಟೌಟ್: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಪ್ರಾಂಶುಪಾಲರು ಈ ಬಗ್ಗೆ ಬಾಲಕಿಯ ತಾಯಿಯಲ್ಲಿ ವಿಚಾರಿಸಿದಾಗ ಮಾಹಿತಿ ಬಯಲಾಗಿದೆ. ಈ ಕುರಿತು ಪೊಲೀಸ್ ದೂರು ದಾಖಲಿಸುವಂತೆ ಬಾಲಕಿಯ ತಾಯಿಗೆ ಪ್ರಾಂಶುಪಾಲರು ಸೂಚಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಘಟನೆಯು ಕೃಷ್ಣಗಿರಿಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Related posts

ಮಾರಕಾಯುಧಗಳಿಂದ ಹೊಡೆದು ಜೆಡಿಎಸ್ ಮುಖಂಡನ ಕೊಲೆ..! ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಮತ್ತೆ ಲಿಪ್ ಲಾಕ್..! ಈ ಸಲ ಬಾಲಿವುಡ್ ನಟನ ಜೊತೆಗೆ ಕಿಸ್ಸಿಂಗ್..! ಏನಿದು ವಿಚಾರ ಇಲ್ಲಿದೆ ಡಿಟೇಲ್ಸ್

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಚ್‌.ಡಿ ದೇವೇಗೌಡ ಮತ್ತು ಎಚ್‌.ಡಿ.ಕೆ ಹೆಸರು ಬಳಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ..! ತೀವ್ರಗೊಂಡ ರೇವಣ್ಣ ವಿಚಾರಣೆ