Latestದೇಶ-ವಿದೇಶರಾಜಕೀಯವೈರಲ್ ನ್ಯೂಸ್

100 ಉಗ್ರರು ಹತರಾಗಿದ್ದಾರೆ, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದ ಸಚಿವ ರಾಜನಾಥ್ ಸಿಂಗ್..! ಸರ್ವಪಕ್ಷ ಸಭೆಯ ಬಳಿಕ ಕುತೂಹಲ ಮೂಡಿಸಿದ ರಕ್ಷಣಾ ಸಚಿವರ ಹೇಳಿಕೆ..!

638

ನ್ಯೂಸ್ ನಾಟೌಟ್: ‘ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ ಗುರಿಯಾಗಿಸಿ ಭಾರತ ನಡೆಸಿರುವ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಕನಿಷ್ಠ 100 ಉಗ್ರರು ಹತ್ಯೆಗೀಡಾಗಿದ್ದಾರೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಗುರುವಾರ) ಮಾಹಿತಿ ನೀಡಿದ್ದಾರೆ.

ಆಪರೇಷನ್ ಸಿಂಧೂರ ಸಂಬಂಧ ಇಂದು(ಮೇ.8) ನಡೆದ ಸರ್ವಪಕ್ಷ ಸಭೆಯಲ್ಲಿ ಈ ಕುರಿತು ರಕ್ಷಣಾ ಸಚಿವರು ವಿವರಣೆ ನೀಡಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಸಶಸ್ತ್ರ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. ಸದ್ಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಜಾರಿಯಲ್ಲಿದ್ದು, ಒಂದು ವೇಳೆ ಪಾಕಿಸ್ತಾನ ದಾಳಿ ನಡೆಸಿದರೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ರಾಜನಾಥ ತಿಳಿಸಿದ್ದಾರೆ.

‘ಆಪರೇಷನ್ ಸಿಂಧೂರ ಜಾರಿಯಲ್ಲಿರುವುದರಿಂದ ಸಶಸ್ತ್ರ ಪಡೆಗಳ ಈ ಕಾರ್ಯಾಚರಣೆಗೆ ಸಂಬಂಧಿಸಿದ ತಾಂತ್ರಿಕ ವಿವರಗಳನ್ನು ಈಗ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಸಶಸ್ತ್ರ ಪಡೆಯ ಯಾವುದೇ ಅಧಿಕಾರಿಯೂ ಸಭೆಯಲ್ಲಿ ಭಾಗವಹಿಸಿಲ್ಲ. ಅವರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಒಮ್ಮತ ಮೂಡಿಬಂದಿದೆ. ಗಡಿಯಲ್ಲಿ ಭಾರತೀಯರ ಭದ್ರತೆ ಹಾಗೂ ರಾಷ್ಟ್ರೀಯ ಭದ್ರತೆ ಬಗ್ಗೆ ವಿಪಕ್ಷದವರು ಕಳವಳ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರ ಹಾಗೂ ಸಶಸ್ತ್ರ ಪಡೆಗಳ ಜತೆ ಇಡೀ ದೇಶವೇ ಒಗ್ಗಟ್ಟು ಪ್ರದರ್ಶಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಚಿವ ಜಮೀರ್ ಆದೇಶ..! ಇಲ್ಲಿದೆ ಸಂಪೂರ್ಣ ಮಾಹಿತಿ

ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿಗೆ 13 ಭಾರತೀಯ ನಾಗರಿಕರು ಸಾವು..! ನೂರಾರು ಗಡಿ ನಿವಾಸಿಗಳು ಭೂಗತ ಬಂಕರ್‌ ಗಳಲ್ಲಿ ವಾಸ..!

See also  ಕುಂಭಮೇಳ ಮುಗಿಸಿ ಪಿಜ್ಜಾ ತಿನ್ನಲು ಬಂದ ಸಾಧುಗಳು:ವಿಡಿಯೋ ಸೆರೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಯುವತಿ!ವಿಡಿಯೋ ವೈರಲ್
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget