ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಅಮರ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷರಾದ ದಿ. ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ ದಿ. ಕುರುಂಜಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಕೆವಿಜಿ ಅವರ ಆದರ್ಶ ಹಾಗೂ ಶಿಕ್ಷಣ ಸಂಸ್ಥೆಗಳನ್ನು ರೂಪಿಸಿದ ಬಗೆಯನ್ನು ಶ್ಲಾಘಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಹರಿಣಿ ಪುತ್ತೂರಾಯ ಹಾಗೂ ಕಾಲೇಜಿನ ಬೋಧಕ ಬೋಧಕೇತರ ವರ್ಗದವರು ದಿ. ಕೆವಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.