ನ್ಯೂಸ್ ನಾಟೌಟ್: ಕಿವಿ ಕೇಳಿಸದ, ಮಾತು ಬಾರದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಗಳಿಗೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ರಾಂಪುರ್ ನಲ್ಲಿ ನಡೆದಿದೆ.
ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಹಾಗೂ ಖಾಸಗಿ ಭಾಗಗಳಿಗೆ ಸಿಗರೇಟ್ ನಿಂದ ಸುಟ್ಟ ಗುರತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಶಂಕಿತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ವೈದ್ಯಕೀಯ ಪರೀಕ್ಷೆ ನಡೆಸಿದ ಡಾ. ಅಂಜು ಸಿಂಗ್ , ಇದು ಒಂದಕ್ಕಿಂತ ಹೆಚ್ಚಿನ ವ್ಯಕ್ತಿಗಳು ನಡೆಸಿದ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳಿವೆ, ಆಕೆಯ ಮುಖಕ್ಕೆ ಬಲವಾಗಿ ಹೊಡೆದಿರುವುದರಿಂದ ಮುಖ ಊದಿಕೊಂಡಿದೆ, ಅಲ್ಲದೇ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿರುವ ಗುರುತುಗಳಿವೆ. ಅಷ್ಟಲ್ಲದೇ ಹುಡುಗಿಯ ಬಟ್ಟೆ ಪೂರ್ತಿ ರಕ್ತದ ಕಲೆಗಳಿಂದ ಕೂಡಿತ್ತು ಎಂದು ವಿವರಿಸಿದ್ದಾರೆ.
ಸದ್ಯ ವೈದ್ಯಕೀಯ ಪರೀಕ್ಷೆ ಪೂರ್ಣಗೊಳಿಸಲಾಗಿದೆ. ಬಾಲಕಿ ಭಯಭೀತಳಾಗಿದ್ದರಿಂದ ಆಕೆಯನ್ನ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗಿದೆ. ಕೃತ್ಯ ನಡೆದಾಗಿನಿಂದ ಬಾಲಕಿ ಆತಂಕಗೊಂಡಾಗಲೆಲ್ಲ ಫಿಟ್ಸ್ ಬರುತ್ತದೆ ಎಂದು ಆಕೆಯ ತಾಯಿ ಅಳಲು ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತನಿಖೆ ಪ್ರಾರಂಭಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ಮೂರು ತಂಡಗಳನ್ನ ರಚನೆ ಮಾಡಿದ್ದಾರೆ. ಓರ್ವ ಶಂಕಿತನನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಮುಂದುವರಿಸಿದ್ದಾರೆ.
ವಕ್ಫ್ ತಿದ್ದುಪಡಿಗೆ ತಡೆ, ಯಥಾಸ್ಥಿತಿ ಕಾಪಾಡಿ ಎಂದ ಸುಪ್ರೀಂ ಕೋರ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ