Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

1.3k
Pic Cr: Public Tv
Spread the love

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ.
ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸನೀಹದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತಳ ಅಣ್ಣ ಎಂ.ಎ ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

See also  ನಕ್ಸಲ್ ನಾಯಕನನ್ನು ಕೋರ್ಟ್ ಗೆ ಕರೆತಂದ ಪೊಲೀಸರು, ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget