ಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ಇಂದು(ಡಿ.16) ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರಲಿರುವ ಪವಿತ್ರಗೌಡ, ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಯ ಬಾಂಡ್, ಇಬ್ಬರ ಭದ್ರತೆ ಮತ್ತು ಷರತ್ತುಗಳೊಂದಿಗೆ ಬಿಡುಗಡೆ

247

ನ್ಯೂಸ್ ನಾಟೌಟ್: ಜೈಲು ಸೇರಿದ್ದ ಪವಿತ್ರಾ ಗೌಡ ಇಂದು(ಡಿ.16) ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ.
6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.

ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯಲಿದೆ. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ ಎನ್ನಲಾಗಿದೆ.

ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.

ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು ಎನ್ನಲಾಗಿದೆ.

Click

https://newsnotout.com/2024/12/telugu-bigboss-kannada-news-viral-news-mysore-v/
See also  350ಕ್ಕೂ ಹೆಚ್ಚು ಮಂದಿಗೆ PUC, SSLC ನಕಲಿ ಅಂಕಪಟ್ಟಿ ನೀಡಿದ್ದವರು ಅರೆಸ್ಟ್..! ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯನ್ನೇ ಕಟ್ಟಿದ್ದ ದಂದೆಕೋರರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget