Latestಕ್ರೈಂವೈರಲ್ ನ್ಯೂಸ್

17ರ ಬಾಲಕಿ ಮೇಲೆ ಅತ್ಯಾಚಾರ..! ಮೃತ ವ್ಯಕ್ತಿಯ ವಿರುದ್ಧ ಕೇಸ್‌ ದಾಖಲು..!

1.4k

ನ್ಯೂಸ್ ನಾಟೌಟ್: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೃತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಮಹಾರಾಷ್ಟ್ರ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 64(1)(ಅತ್ಯಾಚಾರ) ಅಡಿಯಲ್ಲಿ ಶನಿವಾರ (ಫೆ.15) ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಎಫ್‌ಐಆರ್‌ ನಲ್ಲಿ ಆರೋಪಿಯ ಸಾವಿನ ಸಮಯ ಮತ್ತು ಸಂದರ್ಭಗಳ ಬಗ್ಗೆ ವಿವರ ನೀಡಿಲ್ಲ ಎಂದು ತಿಳಿದುಬಂದಿದೆ.

ಆರೋಪಿಯು ಮುಂಬ್ರಾದ ತನ್ನ ನೆರೆಹೊರೆಯ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ. 2024ರ ಜೂನ್ ಮತ್ತು ಆಗಸ್ಟ್ ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ಕುಟುಂಬಸ್ಥರ ವಿರೋಧದ ನಡುವೆಯೂ ಬಾಲಕಿಯನ್ನು ವಿವಾಹವಾಗಿದ್ದ. ಸದ್ಯ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಆತ ಈ ನಡುವೆ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಪೊಲೀಸರು ಹಂಚಿಕೊಂಡಿಲ್ಲ.

 

See also  ಮಂಗಳೂರು: ತಡರಾತ್ರಿ ಅರೆ ಪ್ರಜ್ಞಾವಸ್ಥೆಯಲ್ಲಿ ಯುವತಿ ಪತ್ತೆ..! ಮೈ ಮೇಲೆಲ್ಲ ಗಾಯದ ಗುರುತು, ಅತ್ಯಾಚಾರದ ಶಂಕೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget