ಕ್ರೈಂ

ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗೆ ಹಠಾತ್‌ ಹೃದಯಾಘಾತ..!ಕುಸಿದು ಬಿದ್ದು ಕೊನೆಯುಸಿರೆಳೆದ ಯುವಕ..ವಿಡಿಯೋ ವೈರಲ್

167

ನ್ಯೂಸ್‌ ನಾಟೌಟ್‌ : ವಿದ್ಯಾರ್ಥಿಯೊಬ್ಬ ಹಠಾತ್‌ ಹೃದಯಾಘಾತಗೊಂಡು ಅಸುನೀಗಿದ ಹೃದಯವಿದ್ರಾವಕ ಘಟನೆ ಬಗ್ಗೆ ವರದಿಯಾಗಿದೆ.ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಈತ ಇಂದೋರ್‌ನಲ್ಲಿ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ.ಈ ವೇಳೆಗಾಗಲೇ ಈ ದುರಂತ ಸಂಭವಿಸಿದೆ.

ರಾಜಾ (18) ಮೃತ ವಿದ್ಯಾರ್ಥಿ, ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿಯಾಗಿದ್ದಾನೆ. ವಿದ್ಯಾರ್ಥಿ ಉನ್ನತ ವ್ಯಾಸಂಗಕ್ಕಾಗಿ ಇಂದೋರ್‌ನಲ್ಲಿ ನೆಲೆಸಿದ್ದಾನೆ.ರಾಜಾ ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗಳಿಗೆ ಅದೇ ಜಿಲ್ಲೆಯ ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ ಸೇರಿದ್ದನು. ರಾಜಾ ಪ್ರತಿದಿನದಂತೆ ಕೋಚಿಂಗ್ ಸೆಂಟರ್​​ಗೆ ಬಂದು ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಏಕಾಏಕಿ ತರಗತಿಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿದೆ.ವಿದ್ಯಾರ್ಥಿ ಎದೆಯಲ್ಲಿ ನೋವಿನಿಂದ ನರಳುತ್ತಾ ಕುಳಿತಲ್ಲೇ ಕುಸಿದು ಬಿದ್ದಿದ್ದ. ಇದನ್ನು ಗಮನಿಸಿದ ಸಹ ವಿದ್ಯಾರ್ಥಿಗಳು ರಾಜಾ ಅವರನ್ನು ಎತ್ತಿ ಬೆಂಚಿನ ಮೇಲೆ ಕೂರಿಸಿದರು. ರಾಜ ಅದಾಗಲೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ.ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ವೈದ್ಯರು ರಾಜಾ ಈಗಾಗಲೇ ಕೊನೆಯುಸಿರೆಳೆದಿದ್ದಾರೆಂದು ದೃಢಪಡಿಸಿದರು. ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಯಲ್ಲಿ ಇಡೀ ಘಟನೆ ದಾಖಲಾಗಿದೆ.

See also  ನಟ ಸಲ್ಮಾನ್ ಖಾನ್ ಸೇರಿದಂತೆ ಮೂವರಿಗೆ ಮತ್ತೆ ಕಾನೂನು ಸಂಕಷ್ಟ..! ಹೈಕೋರ್ಟ್ ಮೊರೆ ಹೋದ ರಾಜಸ್ಥಾನ ಸರ್ಕಾರ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget