ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭೀಕರ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, 19 ವರ್ಷದ ಯುವತಿಯನ್ನು ಬರೊಬ್ಬರಿ 7 ದಿನಗಳ ಕಾಲ 23 ಮಂದಿ ನಿರಂತರ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ವಾರಣಾಸಿಯಲ್ಲಿ, 23 ಮಂದಿ 7 ದಿನಗಳ ಕಾಲ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಆಕೆಯನ್ನು ಬೇರೆ ಬೇರೆ ಸ್ಥಳಗಳಿಗೆ ಕರೆದೊಯ್ದು ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾರೆ. ಆಘಾತಕಾರಿ ಅಂಶವೆಂದರೆ ಆಕೆಯ ರಕ್ಷಿಸುತ್ತೇವೆ ಎಂದು ಮುಂದೆ ಬಂದವರೇ ಪದೇ ಪದೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ.
ಇದೀಗ ಯುವತಿಯ ದೂರಿನ ಮೇರೆಗೆ ಪೊಲೀಸರು ಈ ವರೆಗೂ 9 ಆರೋಪಿಗಳನ್ನು ಬಂಧಿಸಿದ್ದು, ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಾರ್ಚ್ 29ರಂದು ಮನೆಯಿಂದ ಕಾಣೆಯಾದ 19 ವರ್ಷದ ಯುವತಿಯ ಮೇಲೆ ಬರೋಬ್ಬರಿ 7 ದಿನಗಳ ಕಾಲ 23 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಕೃತ್ಯ ನಡೆದಿದ್ದು, 19 ವರ್ಷದ ಯುವತಿಗೆ ಡ್ರಗ್ಸ್ ನೀಡಿ ಒಂದು ವಾರ ಕಾಲ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದು ಬಂದಿದೆ.