ನ್ಯೂಸ್ ನಾಟೌಟ್: ಭಾರತದ ಆಪರೇಷನ್ ಸಿಂದೂರ ಬಳಿಕ ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ಸಾಲ ಮಂಜೂರು ಮಾಡಿದ್ದ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಇದೀಗ ತನ್ನ ವರಸೆ ಬದಲಿಸಿದೆ. ಸಾಲದ ಹಣ ಬಿಡುಗಡೆ ಮಾಡುವುದಕ್ಕೆ ಮೊದಲೇ 11 ಹೊಸ ಷರತ್ತುಗಳನ್ನು ಪಾಕಿಸ್ತಾನಕ್ಕೆ ವಿಧಿಸಿದೆ. ಜೊತೆಗೆ ಷರತ್ತು ಪಾಲಿಸದಿದ್ದರೆ ಹಣ ಸಿಗುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಸಾಲ ಮಂಜೂರು ಮಾಡಿದ ಬಳಿಕ ಐಎಂಎಫ್ ಗೆ ಸಾಲ ಮರುಪಾವತಿ ಆಗುತ್ತದೆಯೇ ಇಲ್ಲವೇ ಎನ್ನುವ ಆತಂಕ ಶುರುವಾಗಿದೆ. ಹೀಗಾಗಿ ತನ್ನ ವಿಸ್ತೃತ ನಿಧಿ ಸೌಲಭ್ಯ (EFF) ಅಡಿಯಲ್ಲಿ ಸಾಲ ಮಂಜೂರು ಮಾಡಿದ್ದ ಐಎಂಎಫ್ 11 ಹೊಸ ಷರತ್ತುಗಳನ್ನು ವಿಧಿಸಿದೆ. ಭಾರತ ಮತ್ತು ಇತರ ಕೆಲ ದೇಶಗಳ ಒತ್ತಡಕ್ಕೆ ಮಣಿದು ಮತ್ತು ಪಾಕ್ ನ ಪ್ರಸ್ತುತ ಸ್ಥತಿ ಕಂಡು ಐಎಂ ಎಫ್ ಈ ಷರತ್ತುಗಳನ್ನು ವಿಧಿಸಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಜೊತೆಗೆ ಭಾರತ-ಪಾಕಿಸ್ತಾನದ ಉದ್ವಿಗ್ನತೆ ಮುಂದುವರಿದರೆ ಅದರ ಪರಿಣಾಮವು ಹಣಕಾಸು ವ್ಯವಸ್ಥೆ, ದೇಶದ ಆಂತರಿಕ ಮತ್ತು ಬಾಹ್ಯ ಸುಧಾರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಿದೆ. 17.6 ಟ್ರಿಲಿಯನ್ ರೂಪಾಯಿಗಳ ಹೊಸ ಬಜೆಟ್ ಗೆ ಅನುಮೋದನೆ ನೀಡುವುದು, ಕೃಷಿ ಆದಾಯ ತೆರಿಗೆ ಸುಧಾರಣೆ, ಆಡಳಿತದಲ್ಲಿ ಸುಧಾರಣೆ ತರುವುದು, ವಿದ್ಯುತ್ ಬಿಲ್ ಗಳ ಮೇಲೆ ಹೆಚ್ಚಿನ ಸರ್ ಚಾರ್ಜ್ ವಿಧಿಸುವುದು ಸೇರಿದಂತೆ 11 ಷರತ್ತುಗಳನ್ನು ವಿಧಿಸಿದೆ. ಇದು ದುಸ್ಥಿತಿಯಲ್ಲಿರುವ ಪಾಕಿಸ್ತಾನದ ಆರ್ಥಿಕತೆಗೆ ಮತ್ತಷ್ಟು ಹೊಡೆತ ನೀಡುವ ಸಾಧ್ಯತೆಗಳಿವೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.
ಪ್ರಚಾರಕ್ಕಾಗಿ ‘ಆಪರೇಷನ್ ಸಿಂದೂರ್’ ವಿಷಯ ಬಳಸಿಕೊಂಡ ವೈದ್ಯ ಅಮಾನತ್ತು..! ತನಿಖೆಗೆ ಸಮಿತಿ ರಚಿಸಿದ ಆಸ್ಪತ್ರೆ..!
ಅಮೆರಿಕದಲ್ಲಿ ಬಿರುಗಾಳಿಯ ಅಬ್ಬರಕ್ಕೆ 35ಕ್ಕೂ ಹೆಚ್ಚು ಮಂದಿ ಬಲಿ..! 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ