ವೈರಲ್ ನ್ಯೂಸ್ಶಿಕ್ಷಣ

2000 ರೂ. ನೋಟು ವಾಪಸ್‌ ಮಾಡಲು ಮೂರೇ ದಿನ ಬಾಕಿ! ಗಡುವು ಮುಗಿದ ಮೇಲೂ ಬಾಕಿ ಇದ್ದರೆ ಏನು ಮಾಡಬೇಕು?

167

ನ್ಯೂಸ್ ನಾಟೌಟ್: ಕಳೆದ ಮೇ ತಿಂಗಳಿನಲ್ಲಿ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದ್ದ ಆರ್‌ಬಿಐ, ಬಳಿಕ ಅವುಗಳನ್ನು ಬ್ಯಾಂಕ್‌ಗೆ ಹಿಂದಿರುಗಿಸಲು ನೀಡಿದ್ದ ಸೆ.30ರ ಗಡುವಿಗೆ ಇನ್ನು 3 ದಿನ ಮಾತ್ರ ಬಾಕಿ ಉಳಿದಿದೆ.

ಹೀಗಾಗಿ ಗಡುವು ಮುಗಿದ ಬಳಿಕವೂ ನೋಟುಗಳನ್ನು ಹಿಂದಿರುಗಿಸಲು ಸಾಧ್ಯವಾಗದಿದ್ದರೆ ಏನು ಮಾಡಬೇಕೆಂಬ ಪ್ರಶ್ನೆ ಎದ್ದಿದೆ.

ಈಗಾಗಲೇ ಚಲಾವಣೆಯಲ್ಲಿದ್ದ 3.32 ಲಕ್ಷ ಕೋಟಿ ರು. ಮೌಲ್ಯದ ನೋಟುಗಳ ಪೈಕಿ ಶೇ.93ರಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿವೆ. ಹೀಗಾಗಿ ನೋಟು ಹಿಂದಿರುಗಿಸಲು ನೀಡಿರುವ ಗಡುವನ್ನು ವಿಸ್ತರಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಸೆ.30ರವರೆಗೆ ಜನರು ತಮ್ಮಲ್ಲಿರುವ 2,000 ಮುಖಬೆಲೆಯ ನೋಟುಗಳನ್ನು ಯಾವುದೇ ಬ್ಯಾಂಕುಗಳಲ್ಲಿ ನೀಡಿ ಇತರ ನೋಟುಗಳಿಂದ ಬದಲಾಯಿಸಿಕೊಳ್ಳಬಹುದುಅಥವಾ ತಮ್ಮ ಬ್ಯಾಂಕ್‌ ಖಾತೆಯಲ್ಲಿ ಠೇವಣಿ ಮಾಡಬಹುದಾಗಿದೆ. ಆದರೆ ಈ ಬಗ್ಗೆ ಅ.1ರಂದು ಆರ್‌ಬಿಐ ತನ್ನ ಯಾವುದೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಗಡುವು ವಿಸ್ತರಿಸದೆ ನೋಟು ಅಮಾನ್ಯ ಮಾಡಬಹುದು ಎನ್ನಲಾಗುತ್ತಿದೆ.

See also  ಶಿಕ್ಷಕನ ಮೊಬೈಲ್ ​​ನಲ್ಲಿ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳ ಫೋಟೋ..! ಸರ್ಕಾರಿ ಶಾಲಾ ಶಿಕ್ಷಕ ಮೊಹಮ್ಮದ್​ ಸಾದಿಕ್ ಬಂಧನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget