ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಸಭೆ ಬುಧವಾರ ನಡೆದಿದೆ. ಸಭೆಯಲ್ಲಿ ಮಹತ್ವದ ವಿಚಾರ ಚರ್ಚೆ ನಡೆದಿದೆ. ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ತೀರ್ಮಾನಿಸಲಾಯಿತು. ಅವರು ಆ ಜಿಲ್ಲೆಗಳಿಗೆ ಭೇಟಿ ನೀಡಿ, ಕೋವಿಡ್ ಸ್ಥಿತಿಗತಿ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ, ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಇದೇ ವೇಳೆ ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲು ತೀರ್ಮಾನಿಸಲಾಯಿತು. ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ ಟಿ ಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಯಿತು. ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ತೆಗೆದುಕೊಳ್ಳಲಾಯಿತು.
- +91 73497 60202
- [email protected]
- November 23, 2024 7:16 AM