ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ವೀಕೆಂಡ್ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದಷ್ಟೆ ಎಲ್ಲ ನಿಯಮಗಳನ್ನು ಸಡಿಲಗೊಳಿಸಿ, ಸುಸೂತ್ರ ಓಡಾಟಕ್ಕೆ ಅನುವು ಮಾಡಿಕೊಡಲಾಗಿತ್ತು.ಇದೀಗ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ._ _ಬೆಂಗಳೂರಿನಲ್ಲಿ ಸೋಂಕಿತರ ಗಡಿ 500 ದಾಟಿದ ಬೆನ್ನಲ್ಲೇ ವೀಕೆಂಡ್ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಹಂತದಲ್ಲಿ ಚರ್ಚೆ ನಡೆಯುತ್ತಿದ್ದು, ಕರ್ಫ್ಯೂ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ._ ಅನ್ ಲಾಕ್ ಆದ ತಕ್ಷಣ ಜನರ ಸುತ್ತಾಟ ಆರಂಭವಾಗಿದ್ದು, ಮೂರನೇ ಅಲೆಗೆ ಆಹ್ವಾನಿಸಿದಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ನಿಯಮ ಬಿಗಿಗೊಳಿಸುವ ಅವಶ್ಯಕತೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಂದ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಬಿಬಿಎಂಪಿ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ಶೀಘ್ರವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. 300 ರಷ್ಟಿದ್ದ ಸೋಂಕಿತ ಸಂಖ್ಯೆ ಇದೀಗ 500 ರಷ್ಟು ಬರುತ್ತಿದೆ._ಕೊರೋನಾ ಭೀತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
- +91 73497 60202
- [email protected]
- November 24, 2024 12:28 PM