ಗೋಳಿತೊಟ್ಟು: ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ಹೊಸಮಜಲು ನಿವಾಸಿ ಚಂದ್ರಶೇಖರ ಶೆಟ್ಟಿ (50 ) ಹಾಗೂ ಸುರತ್ಕಲ್ ನ ಸೂರಿಂಜೆಯ ದಾವೂದ್ ಹಕೀಂ (36 ) ಬಂಧಿತ ಆರೋಪಿಗಳೆಂದು ತಿಳಿದು ಬಂದಿದೆ. ಕಳೆದ ಡಿಸೆಂಬರ್ ನಲ್ಲಿ ತುಕ್ರಪ್ಪ ಶೆಟ್ಟಿ ಅವರ ಮನೆಗೆ ನುಗ್ಗಿದ ದರೋಡೆಕೋರರು ತುಕ್ರಪ್ಪ ಶೆಟ್ಟಿ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಚಿನ್ನಾಭರಣ ದೋಚಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹು ದಿನಗಳ ನಂತರ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
- +91 73497 60202
- [email protected]
- December 3, 2024 10:49 PM