ಬಂಟ್ವಾಳ: ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52 ವರ್ಷದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ. ಸಿದ್ದಕಟ್ಟೆ ಅನಿಲ್ ಎಂಬಾತ ಅತ್ಯಾಚಾರ ಆರೋಪಿಯಾಗಿದ್ದು, ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಆಗಸ್ಟ್ 11 ರಂದು ಘಟನೆ ನಡೆದಿದ್ದು, ತಡವಾಗಿ ಮಾಹಿತಿ ಲಭ್ಯವಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿಯಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಡಪಾಯಿ ಮಹಿಳೆ. ಇವರು ಗಂಡನನ್ನು ಕಳೆದುಕೊಂಡು ಬಳಿಕ ಮಗಳೊಂದಿಗೆ ವಾಸವಾಗಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಮಗಳಿಗೆ ಮದುವೆಯಾಗಿದ್ದು ಒಬ್ಬಂಟಿಯಾಗಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಅತ್ಯಾಚಾರ ಮಾಡಿದ ದುಷ್ಕರ್ಮಿ ಯಾರ ಬಳಿಯಲ್ಲಿ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
- +91 73497 60202
- [email protected]
- December 4, 2024 2:14 PM