ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ಬಂಧಿಯಾಗಿದ್ದು, ಇನ್ನೊಂದೆಡೆ ಶಿಲ್ಪಾ ಶೆಟ್ಟಿ ಮೇಲೆ ಚೀಟಿಂಗ್ ಕೇಸ್ ದಾಖಲಾಗಿದೆ. ಅದರಲ್ಲಿ ಅವರ ತಾಯಿ ಸುನಂದಾ ಶೆಟ್ಟಿ ಹೆಸರು ಕೂಡ ಕೇಳಿಬಂದಿದ್ದು, ಇಬ್ಬರೂ ಈಗ ಬಂಧನ ಭೀತಿಯಲ್ಲಿ ದಿನ ಕಳೆಯುವಂತಾಗಿದೆ.
ಶಿಲ್ಪಾ ಶೆಟ್ಟಿ ಅವರು ಫಿನ್ನೆಟ್ ಕೇಂದ್ರವನ್ನೂ ನಡೆಸುತ್ತಿದ್ದು, ಇವೋಸಿಸ್ ವೆಲ್ನೆಸ್ ಎಂಬ ಫಿಟ್ನೆಸ್ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ನಗರಗಳಲ್ಲಿ ಆರಂಭ ಮಾಡುವುದಾಗಿ ಭರವಸೆ ನೀಡಿ, ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿರುವ ಶಿಲ್ಪಾ ಮತ್ತು ಸುನಂದಾ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇನ್ನು ಈ ಸಂಬಂಧ ಜೋಸ್ನಾ ಚೌಹಾಣ್ ಮತ್ತು ರೋಹಿತ್ ವೀರ್ ಸಿಂಗ್ ಎಂಬುವವರು ದೂರು ದಾಖಲಿಸಿದ್ದು, ಲಖನೌನ ಹಜರತ್ಗಂಜ್ ಮತ್ತು ವಿಭೂತಿ ಖಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- +91 73497 60202
- [email protected]
- November 26, 2024 12:05 PM