ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣ ಮಿತಿ ಮೀರುತ್ತಿರುವ ಹಿನ್ನಲೆಯಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ. ದ.ಕ ಸೇರಿದಂತೆ ಒಟ್ಟು 8 ಜಿಲ್ಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಇರಲಿದೆ. ರಾಜ್ಯದ್ಯಂತ ನಾಳೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂಗೆ ನಿರ್ಧಾರ ಮಾಡಲಾಗಿದೆ. ಈ ಕುರಿಂತಂತೆ ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದ.ಕ ಜಿಲ್ಲೆ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ನಿರ್ಧರಿಸಲಾಗಿದೆ. ಕೊವಿಡ್ 19 ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಬೇಕಾಗಿದೆ. ಈಗಾಗಲೇ ಶಾಲಾ ಕಾಲೇಜ್ ಗಳು ಆರಂಭಗೊಂಡಿವೆ. ಈ ಬಗ್ಗೆ ಕೂಡ ಚಿಂತನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು. ಕೇರಳ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ ನಲ್ಲಿ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.
- +91 73497 60202
- [email protected]
- September 20, 2024 6:04 PM