ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗಿ ಸ್ಮರಣೀಯ ಗಿಫ್ಟ್ ನೀಡಿ ಗಮನ ಸೆಳೆದಿದ್ದಾರೆ. ಕಮಲಾ ಹ್ಯಾರಿಸ್ ಅವರ ಅಜ್ಜ ಪಿ.ವಿ.ಗೋಪಾಲನ್ ಅವರು ಭಾರತದಲ್ಲಿ ಸರ್ಕಾರಿ ಅಧಿಕಾರಿಯಾಗಿ ಉನ್ನತ ಮಟ್ಟದ ಹುದ್ದೆಯಲ್ಲಿದ್ದವರು. ಅವರಿಗೆ ಸೇರಿದ್ದ ಕೆಲವು ಹಳೆಯ ಅಧಿಸೂಚನೆಗಳ ಪ್ರತಿಗಳು, ಮರದಿಂದ ತಯಾರಿಸಿದ್ದ ಕರಕುಶಲ ಫ್ರೇಮ್, ವಾರಾಣಸಿಯ ವಿಶಿಷ್ಟ ಕಲಾಕೃತಿ, ಚೆಸ್ ಸೆಟ್ ಇವುಗಳನ್ನು ಮೋದಿ ಅವರು ಉಡುಗೊರೆಯಾಗಿ ಕಮಲಾ ಹ್ಯಾರಿಸ್ ಅವರಿಗೆ ನೀಡಿದ್ದಾರೆ.
ಯಶಸ್ವಿ ದ್ವಿಪಕ್ಷೀಯ ಮಾತುಕತೆ
ಶ್ವೇತಭವನದಲ್ಲಿ ನಡೆಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಮೋದಿ, ಅಧ್ಯಕ್ಷ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್ ಅವರ ನಾಯಕತ್ವದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ಹೊಸ ಎತ್ತರ ತಲುಪಲಿದೆ ಎಂದು ಹೇಳಿದ್ದರು. ಕಮಲಾ ಜತೆಗಿನ ದ್ವಿಪಕ್ಷೀಯ ಮಾತುಕತೆ ಯಶಸ್ವಿಯಾಗಿದೆ ಎಂದೂ ಸರ್ಕಾರಿ ಮೂಲಗಳು ಹೇಳಿವೆ.