ಕೊಡಗು: ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ವಧು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣು ಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
- +91 73497 60202
- [email protected]
- November 23, 2024 2:19 AM