ಬಜಗೋಳಿ: ಯೂತ್ ಫಾರ್ ಸೇವಾ ಸಂಸ್ಥೆ ವತಿಯಿಂದ ಬಜಗೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ವಿತರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಟೋನ್ ಕ್ರಷರ್ ಹಾಗೂ ಕ್ವಾರಿ ಮಾಲೀಕರಾದ ಸಂಘದ ರಾಜ್ಯ ಅಧ್ಯಕ್ಷ ರವೀಂದ್ರ ಶೆಟ್ಟಿ ನೆರವೇರಿಸಿದರು.
ಇದೇ ವೇಳೆ ಮಾತನಾಡಿದ ಅವರು, ಹಳ್ಳಿಯ ಶಾಲೆ ಗುರುತಿಸಿ ಆ ಮಕ್ಕಳಿಗೆ ಬೇಕಾಗಿರುವ ಸಲಕರಣೆಗಳನ್ನು ಕೊಟ್ಟು ಮಕ್ಕಳ ಖುಷಿಯನ್ನು ಕಾಣುತ್ತಿರುವ ಈ ಸಂಸ್ಥೆಗೆ ಶುಭವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೂಥ್ ಫಾರ್ ಸೇವಾ ಜಿಲ್ಲಾ ಸಂಚಾಲಕಿ ರಮಿತಾ ಶೈಲೇಂದ್ರ ಅವರು, ಯೂತ್ ನ ಸಮಾಜದಲ್ಲಿ ಮಾದರಿ ಆಗಿ ಮಾಡೋದು, ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಸಂಸ್ಥೆ ಮುಖ್ಯ ಉದ್ದೇಶ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಸಮಾಜ ಸೇವಕಿ ಗಾಯತ್ರಿ ಪ್ರಭು, ಗ್ರಾಮ ಪಂಚಾಯತ್ ಸದಸ್ಯರಾದ ರಜತ್ ರಾಮ್ ಮೋಹನ್, ರೇಖಾ ಎಸ್ ಭಂಡಾರಿ, ಶೃತಿ ಅಧಿಕಾರಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿನ್ಸೆಂಟ್ ಡಿಸೋಜ, ಮುಖ್ಯೋಪಾಧ್ಯಾಯರಾದ ವಿಜಯಕುಮಾರ್ ಅತಿಥಿಗಳಾಗಿ ಉಪಸ್ಥಿತರಿದ್ದರು ಮತ್ತು ಯೂತ್ ಫಾರ್ ಸೇವಾ ಸದಸ್ಯರು ಮಕ್ಕಳು ಪೋಷಕರು ಉಪಸ್ಥಿತರಿದ್ದರು.