ಬೆಂಗಳೂರು: ಕನ್ನಡ ನೆಲದಲ್ಲಿ ಕನ್ನಡ ವಿರೋಧಿ ಕೃತ್ಯ ನಡೆಸುತ್ತಿರುವ ಎಂಇಎಸ್ ನ್ನು ನಿಷೇಧಿಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಇಂದು ಬೆಂಗಳೂರಲ್ಲಿ ಈ ಸಂಬಂಧ ಸಭೆ ಕರೆದು ತೀರ್ಮಾನ ತೆಗೆದುಕೊಂಡಿವೆ. ರಾಜ್ಯ ಸರಕಾರ ನಿಷೇಧ ಕುರಿತು ಮಾತನಾಡಿದೆ, ಆದರೆ ಈ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಈ ಹಿನ್ನಲೆಯಲ್ಲಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕರೆ ನೀಡಿವೆ.
ಹಿರಿಯ ಕನ್ನಡ ಧುರೀಣ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿಸಲಾಗಿದೆ.