ಮಂಗಳೂರು: ಇತ್ತೀಚೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವೊಂದು ದಾಖಲಾಗಿತ್ತು. ಮಹಮ್ಮದ್ ಶರೀಫ್ ಎಂಬವರು ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್ ನಲ್ಲಿ ನಿಲ್ಲಿಸಿದ್ದ ಲಾರಿ, ಹಿಟಾಚಿ ಮತು ಜೆಸಿಬಿಗಳ 7 ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು.
ಬುಧವಾರ ಆರೋಪಿಗಳು ಟಾಟಾ ಏಸ್ ವಾಹನದಲ್ಲಿ 10 ಬ್ಯಾಟರಿಗಳನ್ನು ಮಾರಾಟ ಮಾಡಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಕೊಣಾಜೆ ಪೊಲೀಸರಿಗೆ ಲಭ್ಯವಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಬಾಳೆಪುಣಿ ಗ್ರಾಮದ ಸುಟ್ಪಾಡಿ ಕ್ರಾಸ್ ಬಳಿ ಟಾಟಾ ಏಸ್ ವಾಹನವನ್ನು ತಡೆದು ನಿಲ್ಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.