ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಬಂದ್ ಮಾಡುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕರೋನಾ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲು ಸಿದ್ದ ಎಂದು ಹೇಳಿದ್ದಾರೆ. ಕೋವಿಡ್ ಬಗ್ಗೆ ತಜ್ಞರಿಂದ ಪ್ರತಿದಿನ ವರದಿ ಪಡೆಯುತ್ತಿದ್ದೇವೆ. ವರದಿ ಪ್ರಕಾರ ತಕ್ಷಣಕ್ಕೆ ಆತಂಕ ಬೇಡ, ಕರೋನಾ ಪ್ರಕರಣಗಳಲ್ಲಿ ತೀವ್ರ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲು ನಾವು ಸಿದ್ದರಿದ್ದೇವೆ. ಪೋಷಕರು ಯಾವುದೇ ರೀತಿ ಆತಂಕ ಪಡುವುದು ಬೇಡ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.