ಕಲಬುರಗಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆ, ಕಾಲೇಜುಗಳನ್ನು ಮತ್ತೆ ಬಂದ್ ಮಾಡಬೇಕೆ ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತೆಲಂಗಾಣದಲ್ಲಿ ಈಗಾಗಲೇ ಶಾಲೆಗಳನ್ನು ಬಂದ್ ಮಾಡಲಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ಸಂಜೆ ತಜ್ಞರ ಸಭೆ ಕರೆದು ಚರ್ಚಿಸಲಾಗುವುದು. ಲಾಕ್ ಡೌನ್, ಸೆಮಿಲಾಕ್ ಡೌನ್ ಏನು ಮಾಡಿದರೆ ಉತ್ತಮ ಎಂಬುದನ್ನು ನಿರ್ಧರಿಸಲಾಗುವುದು ಎಂದರು.