ಹೈದರಾಬಾದ್: ಇಲ್ಲಿನ ನಾಗರ್ಕರ್ನೂಲ್ ಜಿಲ್ಲೆಯ ಅಚಂಪೇಟ್ ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಮತ್ತು ಡ್ಯೂಟಿ ವೈದ್ಯರು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದೆ ಇದ್ದುದರಿಂದ ಮಹಿಳೆ ರಸ್ತೆಯಲ್ಲಿ ಮಗುವಿನ ಜನ್ಮ ನೀಡಿದ ಘಟನೆ ನಡೆದಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಇಂತಹ ವರ್ತನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಕರೋನಾ ಇರುವುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ವೈದ್ಯರು , ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಹಿಳೆ ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡಿದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಂಬಂಧಪಟ್ಟ ಸಿಬ್ಬಂದಿಯ ನಿರ್ಲಕ್ಷ್ಯ, ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.