ಮಂಗಳೂರು: ನಗರ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅನಿಲವೊಂದು ಸೋರಿಕೆಯಾಗಿ 20 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ.
ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿದೆ. ಈ ಫ್ಯಾಕ್ಟರಿಯಲ್ಲಿ ಸುಮಾರು 80 ಮಂದಿ ಕೆಲಸಗಾರರಿದ್ದು ಆ ಪೈಕಿ 20 ಮಂದಿ ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಮಹಿಳಾ ಕಾರ್ಮಿಕರೇ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.