ನವದೆಹಲಿ : ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಯಿತು.
ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ಹಲವು ತಿಂಗಳಿನಿಂದ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ ಕುರಿತಂತೆ ವದಂತಿ ಹರಡಿತ್ತು. ಅಪರ್ಣಾ ಯಾದವ್, ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಮಗ ಪ್ರತೀಕ್ ಯಾದವ್ ಪತ್ನಿ. 2017ರಲ್ಲಿ ಎಸ್ ಪಿ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಪರ್ಣಾ ಯಾದವ್, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ್ದರು.