ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಾಕ್ ಡೌನ್ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್ ಡೌನ್ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲ ಎಂದರು. ಎರಡು ವರ್ಷಗಳ ಅನುಭವದಿಂದ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ. ಈಗ ಕೋವಿಡ್ ಹರಡುವುದನ್ನು ಲಾಕ್ ಡೌನ್ ಜಾರಿಗೊಳಿಸುವುದರಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರವೇ ಕೋವಿಡ್ ನಿಯಂತ್ರಣ ಸಾಧ್ಯ ಎಂದು ಹೇಳಿದರು.