ಬೆಂಗಳೂರು: ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಶುಕ್ರವಾರದಿಂದ (ಜ.7) ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.
ವಾರಾಂತ್ಯ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರುವುದಿಲ್ಲ? ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಏನೆಲ್ಲ ಇರುತ್ತೆ…?
* ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ
* ದಿನಸಿ ಅಂಗಡಿ, ಹಾಲು, ತರಕಾರಿ, ಔಷಧ, ಪೆಟ್ರೋಲ್ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
* ಹೋಟೆಲ್ ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರುತ್ತದೆ
* ಐಟಿ ಹಾಗೂ ಇತರೆ ಉದ್ಯಮ ಸಂಸ್ಥೆಗಳ ಸಿಬ್ಬಂದಿ ಗುರುತಿನ ಚೀಟಿಯೊಂದಿಗೆ ಸಂಚಾರಕ್ಕೆ ಅನುಮತಿ
* ಇ–ಕಾಮರ್ಸ್ ಸೇವೆಗೆ ಅವಕಾಶ
* ರೈಲು, ವಿಮಾನ, ಬಸ್ ಸಂಚಾರ ಇರಲಿದೆ
* ಪ್ರಯಾಣ ಚೀಟಿ ಇರುವವರು ಆಟೋ, ಟ್ಯಾಕ್ಸಿ ಬಳಸಲು ಅವಕಾಶ
ಏನೆಲ್ಲ ಇರುವುದಿಲ್ಲ…?
* ಸಾರ್ವಜನಿಕ ಉದ್ಯಾನಗಳು ಬಂದ್
* ಯಾವುದೇ ಪ್ರತಿಭಟನೆ, ಜಾತ್ರೆ, ಮೆರವಣಿಗೆಗೆ ಅವಕಾಶ ಇರುವುದಿಲ್ಲ.
* ಶಾಲಾ–ಕಾಲೇಜ್ ಗಳು ಬಂದ್
* ತುರ್ತು ಸೇವೆ ಬಿಟ್ಟು ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.
* ಅನಗತ್ಯ ಓಡಾಟ, ಸಂಚಾರಕ್ಕೆ ಅವಕಾಶ ಇಲ್ಲ