ಜಾಲ್ಸೂರು: ಕಿಡ್ನಿ ಸಮಸ್ಯೆಯಿಂದಾಗಿ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಫೆ.3ರಂದು ರಾತ್ರಿ ಸಂಭವಿಸಿದೆ.
ಜಾಲ್ಸೂರಿನ ಕದಿಕಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಕಾರ್ತಿಕ್ ಅವರಿಗೆ ಕಿಡ್ನಿಯಲ್ಲಿ ನೀರು ತುಂಬಿ ಹೊಟ್ಟೆ ಉಬ್ಬುವ ಸಮಸ್ಯೆಯಿಂದಾಗಿ ಕಳೆದ ಒಂದು ವರ್ಷಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಆ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡು ಶಾಲೆಗೆ ತೆರಳುತ್ತಿದ್ದರೆನ್ನಲಾಗಿದೆ. ಆದರೆ ಫೆ.3ರಂದು ರಾತ್ರಿ ಮತ್ತೆ ಅಸೌಖ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಮೃತ ಬಾಲಕ ತಂದೆ ಕೃಷ್ಣಪ್ಪ, ತಾಯಿ ಭಾಗೀರಥಿ, ಸಹೋದರ ಚಂದ್ರಪ್ರಸಾದ, ಕಿಶನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.