ನವದೆಹಲಿ: ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಬೆಳಿಗ್ಗೆ ಉಕ್ರೇನ್ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುವಂತೆಯೂ ಉಕ್ರೇನ್ ಸೈನಿಕರಿಗೆ ಕರೆ ನೀಡಿದ್ದಾರೆ.
ಅದರಂತೆ, ರಷ್ಯಾ ಸೇನೆ ಆಕ್ರಮಣ ಆರಂಭಿಸಿದೆ. ಉಕ್ರೇನ್ ನ ಹಲವು ನಗರಗಳಲ್ಲಿ ಸ್ಫೋಟದ ಸದ್ದು ತೀವ್ರಗೊಂಡಿದೆ. ಪುಟಿನ್ ನಡೆಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ. ರಷ್ಯಾದ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎಚ್ಚರಿಕೆ ನೀಡಿದ್ದಾರೆ.