ನವದೆಹಲಿ: ಸಹೋದ್ಯೋಗಿಗೆ ಗುಂಡಿಕ್ಕಿ ಕೊಂದು ಬಳಿಕ ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬಿಎಸ್ಎಫ್ ಜಲಂಗಿ ಕ್ಯಾಂಪ್ ನಲ್ಲಿ ಸೋಮವಾರ ನಡೆದಿದೆ.
ಭಾರತ –ಬಾಂಗ್ಲಾ ಗಡಿ ಕಾವಲಿಗೆ ನಿಯೋಜಿಸಿದ್ದ ಕ್ಯಾಂಪ್ ನಲ್ಲಿ ಇಂತಹದೊಂದು ದುರಂತ ಸಂಭವಿಸಿರುವುದಾಗಿ ಸೇನಾ ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಕೃತ್ಯವು ಬೆಳಿಗ್ಗೆ 6.30ಕ್ಕೆ ನಡೆದಿದೆ. ಸ್ಥಳೀಯ ಪೊಲೀಸ್ ಠಾಣೆ ನೀಡಿದ್ದ ಸಮನ್ಸ್ ಇಬ್ಬರ ನಡುವೆ ಘರ್ಷಣೆಗೆ ಕಾರಣವಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎನ್ನಲಾಗಿದೆ.