ಬೆಂಗಳೂರು: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿನಿಯರಿಗೆ ಕೆಲವು ಷರತ್ತುಗಳೊಂದಿಗೆ ಮರು ಪರೀಕ್ಷೆ ಬರೆಯಲು ರಾಜ್ಯ ಸರಕಾರ ನಿರ್ಧರಿಸಿದೆ.
ಹಿಜಾಬ್ ಧರಿಸಲು ಅನುಮತಿಸಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಬಂದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಗುರುವಾರ ಬಿಜೆಪಿ ಶಾಸಕ ರಘುಪತಿ ಭಟ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು, ಹೈಕೋರ್ಟ್ ಅಂತಿಮ ಆದೇಶ ಬರುವ ಮೊದಲು ಹಿಜಾಬ್’ಗೆ ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾದವರಿಗೆ ಮತ್ತೊಂದು ಅವಕಾಶ ನೀಡಲು ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು. ಆದರೆ, ಹೈಕೋರ್ಟ್ ಅಂತಿಮ ಆದೇಶದ ಬಳಿಕವೂ ಪರೀಕ್ಷೆ ಬಹಿಷ್ಕರಿಸಿ ಹೊರ ಹೋದವರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.