ಈಶ್ವರಮಂಗಲ: ಹಿಂದೂ ಸಂಘಟನೆಯೊಂದರಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಈಶ್ವರ ಮಂಗಲದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈಶ್ವರಮಂಗಲ ಸಮೀಪ ಮಯ್ಯಾಳ ನಿವಾಸಿ ಜೀವನ್ (23 ವರ್ಷ) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸೌಂಡ್ಸ್ ಮತ್ತು ಲೈಟಿಂಗ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ದೇಲಂಪಾಡಿ ಹಿಂದೂ ಐಕ್ಯವೇದಿಕೆ ಘಟಕದ ಸಕ್ರಿಯ ಕಾರ್ಯಕರ್ತರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ಮಹಾಲಿಂಗ ಪಾಟಾಳಿ , ತಾಯಿ ಬೇಬಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.