ಮಡಿಕೇರಿ: ಅಕ್ರಮ ಬಾಂಗ್ಲಾದೇಶ ವಲಸಿಗರು ದೇಶಾದ್ಯಂತ ಇದ್ದು ಕೊಡಗಿನಲ್ಲೂ ಸಾಕಷ್ಟು ಮಂದಿ ಅಕ್ರಮವಾಗಿ ಕಾಫಿ ತೋಟಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಅನ್ನುವ ಶಂಕೆ ವ್ಯಕ್ತವಾಗಿದೆ.
ಸದ್ಯ ಕೊಡಗು ಜಿಲ್ಲೆಯಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಹೊರ ರಾಜ್ಯದ ವಲಸಿಗರಿದ್ದಾರೆ. ಈ ಪೈಕಿ ಪಶ್ಚಿಮ ಬಂಗಾಳ, ಅಸ್ಸಾಂ ನವರಿದ್ದಾರೆ. ಇವರೊಂದಿಗೆ ಹೊರ ರಾಜ್ಯದ ಕಾರ್ಮಿಕರೆಂದು ಹೇಳಿಕೊಂಡು ಬಾಂಗ್ಲಾದೇಶದಿಂದಲೂ ಬಂದವರಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಸ್ವತಃ ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹೀಗೆ ಬಂದ ವಲಸಿಗರು ದರೋಡೆ ಪ್ರಕರಣಗಳಲ್ಲಿ ಬಾಗಿಯಾಗುತ್ತಿದ್ದು ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಹಲ್ಲೆ ನಡೆಸಿ ಸಿಕ್ಕಿದ್ದನ್ನು ದೋಚುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆದು ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.