ಮಡಿಕೇರಿ: ಅಪರೂಪದ ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕ ಬಂಧಿಸಿದೆ. ಟಿ.ವಿ.ಕೃಷ್ಣ, ದರ್ಶನ್ ಬಂಧಿತ ಆರೋಪಿಗಳಾಗಿದ್ದಾರೆ.
ಒಂದು ಜೀವಂತ ಆಮೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಗುಡ್ಡೆ ಹೊಸೂರು ರಸ್ತೆಯ ಬಳಿ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.