ಬೆಂಗಳೂರು: ಜಾತ್ರೆ, ರಥೋತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಮಾಹಿತಿಯಿಲ್ಲ, ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ವಿವಾದ ಕುರಿತು ತೀರ್ಪು ಬಂದ ನಂತರ ಮುಸ್ಲಿಂ ವ್ಯಾಪಾರಿಗಳು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಮಾಡಿದ ಘಟನೆಯ ಮುಂದುವರಿದ ಭಾಗ ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧವಾಗಿದೆ. ಇದು ಸರಿಯಾದ ಕ್ರಮವಲ್ಲ ದುರದೃಷ್ಟಕರ, ಶಾಂತಿ-ಸುವ್ಯವಸ್ಥೆಗೆ ದಕ್ಕೆ ಬರಬಾರದು ಎಂದರು.
ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ, ಈ ರೀತಿ ಆಗದಂತೆ ಜಾಗ್ರತೆ ವಹಿಸುತ್ತೇವೆ. ಪೊಲೀಸರು ಕಣ್ಣಿಟ್ಟು ಕಾಯುತ್ತಿದ್ದಾರೆ. ಮನಸ್ಸುಗಳನ್ನು ಒಡೆಯುವ ಕೆಲಸ ಮಾಡಬಾರದು, ಸಮಾಜ ಒಟ್ಟಾಗಿ ಇಂಥದ್ದನ್ನೆಲ್ಲಾ ಸರಿ ಮಾಡಬೇಕು ಎಂದು ಹೇಳಿದ್ದಾರೆ.