ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ಮಾಸ್ಟರ್ ವಿಮಾನಗಳನ್ನು ಭಾರತ ಸರ್ಕಾರ ನಿಯೋಜಿಸಿದೆ. ಪೊಲೆಂಡ್, ಹಂಗೇರಿ ಮತ್ತು ರೊಮಾನಿಯಾಗಳಿಗೆ ಈ ವಿಮಾನಗಳು ತೆರಳಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ನಡುವೆ ಉಕ್ರೇನ್ನಲ್ಲಿದ್ದ 220 ವಿದ್ಯಾರ್ಥಿಗಳು ಟರ್ಕಿ ರಾಜಧಾನಿ ಇಸ್ತಾಂಬುಲ್ ಮಾರ್ಗವಾಗಿ ಭಾರತಕ್ಕೆ ಬಂದಿದ್ದಾರೆ.
ಮಾನವೀಯ ದೃಷ್ಟಿಯಿಂದ ಉಕ್ರೇನ್ಗೆ ಅಗತ್ಯ ಪರಿಕರಗಳನ್ನು ಒದಗಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಟೆಂಟ್ ಮತ್ತು ಬ್ಲಾಂಕೆಟ್ಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ ಉತ್ತರ ಪ್ರದೇಶದ ಹಿಂಡನ್ ವಾಯುನೆಲೆಯಿಂದ ಟೇಕಾಫ್ ಆಗಲಿದೆ.