ಮಾಸ್ಕೊ: ಉಕ್ರೇನ್ ನ ಮಾರಿಯುಪೋಲ್ ಮತ್ತು ವೋಲ್ನೋವಾಖಾ ಪ್ರದೇಶದಲ್ಲಿ ರಷ್ಯಾ ಸೇನೆ ಇಂದು ಬೆಳಗ್ಗೆ ಕದನ ವಿರಾಮ ಘೋಷಿಸಿದೆ. ಈ ಮೂಲಕ ಮಾನವೀಯ ಪರಿಹಾರ ಕಾರ್ಯ ಕೈಗೊಳ್ಳಲು ಮತ್ತು ನಾಗರಿಕರು ನಗರದಿಂದ ಹೊರ ಹೋಗಲು ಸೇನೆ ಅವಕಾಶ ಮಾಡಿಕೊಟ್ಟಿದೆ.
ಭಾರತೀಯ ಕಾಲಮಾನ ಮಧ್ಯಾಹ್, 2.30ರಿಂದ ಈ ಎರಡೂ ನಗರಗಳಲ್ಲಿ ನಾಗರಿಕರನ್ನು ಸ್ಥಳಾಂತರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆ ವ್ಯಾಪಕವಾಗಿ ಮುಂದುವರಿಯಲಿದೆ ಎಂದೂ ರಷ್ಯಾದ ರಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ.
ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಮಾರಿಯುಪೋಲ್ ಮತ್ತು ವೋಲ್ನೊವೋಖಾ ಪ್ರದೇಶದಲ್ಲಿ ಕದನ ವಿರಾಮ ಘೋಷಣೆ ಮಾಡಲಾಯಿತು. ಪರಿಹಾರ ಕಾರ್ಯ ಕೈಗೊಳ್ಳಲು ‘ಮಾನವೀಯ ಕಾರಿಡಾರ್’ ತೆರಯಲಾಗಿದೆ. ಈ ಮೂಲಕ ನಾಗರಿಕರು ಈ ನಗರಗಳನ್ನು ತೊರೆಯಲು ಅವಕಾಶ ನೀಡಲಾಗಿದೆ ಎಂದು ರಷ್ಯಾ ಸೇನೆ ತಿಳಿಸಿದೆ.