ಕಳೆದ ವರ್ಷ 45 ವರ್ಷದ ವ್ಯಕ್ತಿ ಜತೆಗೆ 25ರ ಯುವತಿ ಮದ್ವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಆದರೀಗ ಶಂಕರಣ್ಣ(45) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾಗಿ ಕೆಲವೇ ತಿಂಗಳಲ್ಲಿ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರ್ನಾಲ್ಕು ದಿನದಿಂದ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋದ ಶಂಕರಣ್ಣನವರು ತಮ್ಮ ಮನೆಯ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.