ಐವರ್ನಾಡು: ಇಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಮರಗಳು ಧರೆಗೆ ಉರುಳಿದ್ದು ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಎರಡು ಕಡೆ ಮರಗಳು ಮುರಿದು ರಸ್ತೆಗೆ ಬಿದ್ದಿದ್ದವು. ಇದರಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿತು. ಇದೇ ವೇಳೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಗೆಲ್ಲು ತಾಗಿ ಗಾಯವಾಗಿದೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ಮಳೆ ಕಡಿಮೆಯಾದ ಬಳಿಕ ಸ್ಥಳೀಯರು ಮರವನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.