ಬೆಂಗಳೂರು: ಮೇ 3 ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಲಿದ್ದು ಈ ಅವಧಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸ್ವತಃ ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜೆ.ಎಸ್.ಗ್ರೂಪ್ ಆಫ್ ಕಂಪನಿ ಆಯೋಜಿಸಿದ್ದ ನೂತನಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ ಬೊಮ್ಮಾಯಿ ತಿಳಿಸಿದರು.