ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಧಿಕ ಕಾರ್ಯದೊತ್ತಡದಿಂದ ಲೋ ಬಿಪಿ ಆಗಿತ್ತು ಅಷ್ಟೇ. ಆಸ್ಪತ್ರೆಯಲ್ಲಿ ಬಿಪಿ ಚೆಕ್ ಮಾಡಿದ್ದಾರೆ, ಎಲ್ಲ ನಾರ್ಮಲ್ ಆಗಿದೆ ಎಂದು ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ. ಆದರೆ ಈ ಬಗ್ಗೆ ವೈದ್ಯರು ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ ಪ್ರಭಾಕರ ಭಟ್ ಅವರ ಆರೋಗ್ಯ ಸ್ಥಿತಿ ನೋಡಿಕೊಂಡು ಮುಂದಿನ ಹೆಲ್ತ್ ಬುಲೆಟಿನ್ ಹೊರಡಿಸುವುದಾಗಿ ತಿಳಿಸಿದ್ದಾರೆ. ಸದ್ಯ ಅವರ ಅಭಿಮಾನಿ ವರ್ಗ ಬಹಳಷ್ಟು ಆತಂಕಕ್ಕೆ ಈಡಾಗಿದ್ದಾರೆ. ಹೀಗಾಗಿ ಅಧಿಕೃತವಾಗಿ ಅವರ ಆರೋಗ್ಯ ಮಾಹಿತಿಯನ್ನು ಹೊರಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿದ್ದ ವೇಳೆ ನಿನ್ನೆ ಹಠಾತ್ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿರಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ಆರೋಗ್ಯದ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ವದಂತಿ ಹರಡಿತ್ತು.