ಬೆಂಗಳೂರು: ‘ಕಮಲಿ’ ಧಾರಾವಾಹಿ ನಿರ್ಮಾಣಕ್ಕೆ ರು. 73 ಲಕ್ಷ ಪಡೆದು ವಂಚಿಸಿದ್ದ ಆರೋಪದಡಿ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
‘ನಿರ್ಮಾಪಕ ರೋಹಿತ್ ಅವರು ಇತ್ತೀಚೆಗೆ ದೂರು ನೀಡಿದ್ದರು. ವಂಚನೆ (ಐಪಿಸಿ 420) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಅರವಿಂದ್ ಕೌಶಿಕ್ನನ್ನು ಬಂಧಿಸಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು. ಕಮಲಿ’ ಧಾರಾವಾಹಿಗಾಗಿ ಅರವಿಂದ್ ಕಥೆ ಸಿದ್ಧಪಡಿಸಿಕೊಂಡಿದ್ದರು. ಧಾರಾವಾಹಿ ನಿರ್ಮಾಣಕ್ಕೆ ಹಣದ ಅವಶ್ಯಕತೆ ಇತ್ತು. ದೂರುದಾರ ರೋಹಿತ್, 2018ರಲ್ಲಿ ಹಂತ ಹಂತವಾಗಿ ₹ 73 ಲಕ್ಷ ಹೂಡಿಕೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.