ನ್ಯೂಸ್ ನಾಟೌಟ್ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತನ್ನ ಕಾರ್ಯಕರ್ತರಿಗೆ ಪೊನ್ನಂಪೇಟೆಯ ಶಾಲಾ ಆವರಣವೊಂದರಲ್ಲಿ ತ್ರಿಶೂಲ ದೀಕ್ಷೆ ಹಾಗೂ ನಿರ್ಜನ ಪ್ರದೇಶವೊಂದರಲ್ಲಿ ಶಸ್ತ್ರಾಸ್ತ್ರ ತರಬೇತಿ ನೀಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆರೋಪಿಸಿದೆ.
ಮಡಿಕೇರಿ ನಗರಸಭಾ ಸದಸ್ಯ ಹಾಗೂ ಎಸ್ ಡಿ ಪಿ ಐ ಪ್ರಮುಖ ಅಮೀನ್ ಮೊಹಿಸಿನ್ ಮಾತನಾಡಿ ಸಮಾಜದ ಸಾಮರಸ್ಯವನ್ನು ಕದಡಲು ಈ ರೀತಿಯ ತರಬೇತಿಗಳನ್ನು ನೀಡಲಾಗುತ್ತಿದೆ, ಇದೊಂದು ಕಾನೂನು ಬಾಹಿರ ಚಟುವಟಿಕೆಯಾಗಿದೆ. ಪೊಲೀಸ್ ಇಲಾಖೆ ಒಂದು ಭಾಗಕ್ಕೆ ಸೀಮಿತವಾಗಿ ಕಾನೂನು ಬಳಸುತ್ತಿದೆ ಎಂದು ಆರೋ ಪಿಸಿದ್ದಾರೆ. ತಕ್ಷಣ ಗೃಹ ಇಲಾಖೆ ಕಠಿಣ ಕ್ರಮ ಕೈಗೊಂ ಡು ಸಂಭಾವ್ಯ ಅನಾಹುತವನ್ನು ತಪ್ಪಿಸಬೇಕೆಂದು ಒತ್ತಾಯಿಸಿರುವ ಅವರು, ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘಿಸಿ ತರಬೇತಿ ನೀಡಿರುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ. ಶಸ್ತ್ರಾಸ್ತ್ರ ತರಬೇತಿ ನೀಡಲು ಕಾರಣವೇನು ಎನ್ನುವುದನ್ನು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿರುವ ಅಮೀನ್ ಮೊಹಿಸಿನ್, ಮೇ 16 ರಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಕುರಿತು ಎಸ್ಡಿಪಿಐ ದೂರು ನೀಡಲಿದೆ ಎಂದು ತಿಳಿಸಿದ್ದಾರೆ.