ನ್ಯೂಸ್ ನಾಟೌಟ್: ಸ್ನಾನಕ್ಕೆಂದು ತೆರಳಿದ್ದ ಯುವಕ ನೀರು ಪಾಲಾದ ಘಟನೆ ನೆಲ್ಯ ಹುದಿಕೇರಿಯ ನಲ್ವತ್ತೆಕ್ಕರೆ ಬರಡಿ ಗ್ರಾಮದಲ್ಲಿ ನಡೆದಿದೆ.
ನೆಲ್ಯ ಹುದಿಕೇರಿಯ ನಿವಾಸಿ ಮಣಿ ಎಂಬುವವರ ಪುತ್ರ ವಿಪಿನ್ (18) ಮೃತ ದುರ್ದೈವಿ. ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗೆ ಇಳಿದ ಸಂದರ್ಭ ಸುಳಿಗೆ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.