ನ್ಯೂಸ್ ನಾಟೌಟ್: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಟೇಬಲ್ ಕೆಳಗಿನಿಂದ ₹55 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.
ಹಾವೇರಿ ತಾಲೂಕಿನ ಆಲದಕಟ್ಟಿ ಪಿಡಿಒ ಸವಿತಾ ಯರೇಸೀಮೆ ಪಿಡಿಒ ಲಂಚ ಸ್ವೀಕರಿಸಿದಾಗ ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ. ಇ–ಸ್ವತ್ತಿನ ಉತಾರ ಮತ್ತು ಖಾತಾ ಬದಲಾವಣೆಗಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಅವರಿಗೆ ಲಂಚದ ಬೇಡಿಕೆ ಇಟ್ಟಿದ್ದರು. ₹55 ಸಾವಿರ ಲಂಚದ ಹಣ ಜತೆಗೆ ಅಕ್ರಮವಾಗಿ ಕಚೇರಿಯಲ್ಲಿ ಇಟ್ಟುಕೊಂಡಿದ್ದ ₹30 ಸಾವಿರ ನಗದನ್ನೂ ವಶಪಡಿಸಿಕೊಳ್ಳಲಾಗಿದೆ. ಪಿಡಿಒ ಸವಿತಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ