ನ್ಯೂಸ್ ನಾಟೌಟ್: ಎಸ್ ಎಸ್ ಎಲ್ ಸಿ 2021-22 ಫಲಿತಾಂಶ ಪ್ರಕಟವಾಗಿದೆ. ಶೇ.85.63 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಒಟ್ಟು 145 ವಿದ್ಯಾರ್ಥಿಗಳು 625/625 ಅಂಕ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಪಡೆದುಕೊಂಡಿದ್ದಾರೆ. 3920 ಶಾಲೆಗಳು ಶೇ.100 ಫಲಿತಾಂಶ ಪಡೆದುಕೊಂಡಿದ್ದರೆ 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 90.29ರಷ್ಟು ಹೆಣ್ಣುಮಕ್ಕಳು ಉತ್ತೀರ್ಣರಾಗಿದ್ದಾರೆ.8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ. ಮಧ್ಯಾಹ್ನ 1 ಗಂಟೆ ನಂತರ https://karresults.nic.in/ ಮತ್ತು www.kseeb.kar.nic.in ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತರ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ನೋಂದಾ ಯಿಸಿಕೊಂಡಿರುವ ಫೋನ್ ನಂಬರ್ ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ
ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.