ನ್ಯೂಸ್ ನಾಟೌಟ್: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಭವಿಸಿರುವ ಭೂಕಂಪದ ಕೇಂದ್ರ ಬಿಂದು ಕೊಡಗಿನ ಚೆಂಬು ಗ್ರಾಮ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಬೆಳಿಗ್ಗೆ 7 ಗಂಟೆ 45 ನಿಮಿಷ 47 ಸೆಕೆಂಡಿಗೆ ಈ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿಗ್ರಾಮವಾಗಿರುವ ಚೆಂಬುವಿನಿಂದ 5.2 ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿಲೋ ಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 3.0 ರಷ್ಟು ಭೂಕಂಪನವಾಗಿದೆ. ಇದರ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ವಾಯುವ್ಯದಲ್ಲಿ 8.2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.4 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 12.1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದೆ. ಹಾಗಾಗಿ ಈ ಪ್ರದೇಶದ 4೦ರಿಂದ 5೦ ಕಿಲೋ ಮೀಟರ್ ದೂರದಲ್ಲಿಭೂಕಂಪನದ ಅನುಭವವಾಗಿದೆ ಎಂದು ಕೆಎಸ್ಎನ್ಡಿಎಂಸಿ ಮಾಹಿತಿ ನೀಡಿದೆ.