ನ್ಯೂಸ್ ನಾಟೌಟ್: ನ್ಯಾಯಾಲಯದ ತೀರ್ಪನ್ನು ಮೀರಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿ ಪ್ರವೇಶಿಸಿದ 6 ಮಂದಿ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.
ಹಿಜಾಬ್ ಧರಿಸಿಕೊಂಡು ಯಾವುದೇ ಕಾರಣಕ್ಕೂ ತರಗತಿಗೆ ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಕಾಲೇಜಿನ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದ 6 ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸರು ಸಭೆ ನಡೆಸಿ ಒಮ್ಮತದ ತೀರ್ಮಾನದಂತೆ ಅಮಾನತು ಮಾಡಿದರು. ಕೆಲವು ವಿದ್ಯಾರ್ಥಿಗಳ ಇಂತಹ ವರ್ತನೆಯಿಂದ ಇಡೀ ಕಾಲೇಜಿನ ವಾತಾವರಣ ಹಾಳಾಗುತ್ತಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದೆ.